ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಿಸಿರುವುದು ಕೇವಲ ಕಾಲ್ಪನಿಕ. ಇದನ್ನು ಆಧರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಹೀಗಾಗಿ ನ್ಯಾಯಾಲಯವು ಪ್ರಾಸಿಕ್ಯೂಷನ್ ರದ್ದತಿ ಮಾಡುವುದರೊಂದಿಗೆ ದೂರುದಾರರಿಗೂ ದಂಡ ವಿಧಿಸಬೇಕು ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದಾರೆ.
ಗುರುವಾರ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದ ವೇಳೆ ಅವರು ಈ ಕುರಿತು ವಾದಿಸಿದ್ದಾರೆ. ರಾಜ್ಯಪಾಲರು ಈಗಲೂ ಆಕ್ಷೇಪಣೆ ಸಲ್ಲಿಸಿಲ್ಲ . ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ. ಅವಶ್ಯವಿದ್ದರೆ ರಾಜ್ಯಪಾಲರು ತಮ್ಮ ಕಡತ ಸಲ್ಲಿಸಲು ಸಿದ್ದರಿದ್ದಾರೆ. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ದಾಖಲಿಸಿ. ಕಾನೂನಿನ ಪ್ರಶ್ನೆ ಇರುವುದರಿಂದ ರಾಜ್ಯಪಾಲರು ಆಕ್ಷೇಪಣೆ ಸಲ್ಲಿಸುವುದಿಲ್ಲ. ಹೀಗಾಗಿ, ರಾಜ್ಯಪಾಲರ ಆಕ್ಷೇಪಣೆ ಗೆ ಕಾಯದೆ ವಿಚಾರಣೆಗೆ ಮನವಿ ಮಾಡಿದ್ದಾರೆ.
ಪೊಲೀಸ್ ಅಧಿಕಾರಿ ಅನುಮತಿ ಪಡೆಯದೇ ತನಿಖೆ ಮಾಡುವಂತಿಲ್ಲ. ಸಾರ್ವಜನಿಕ ಸೇವಕನ ಶಿಫಾರಸ್ಸು, ನಿರ್ಧಾರಗಳ ಕುರಿತು ತನಿಖೆ ಇರಬೇಕು. ಈ ಎರಡನ್ನೂ ರಾಜ್ಯಪಾಲರು ಪಾಲನೆ ಮಾಡಿಲ್ಲ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟವರಿಗೆ ಸ್ವತಃ ರಾಜ್ಯಪಾಲರೇ ದಂಡ ವಿಧಿಸಬೇಕು. ನ್ಯಾಯಾಲಯದಿಂದಲೂ ಕೂಡ ದೂರುದಾರರ ವಿರುದ್ಧ ದಂಡ ವಿಧಿಸಿ ಪಾಠ ಕಲಿಸಬೇಕು. ಸಿಎಂ ವಿರುದ್ಧ ಕೇವಲ ಕಾಲ್ಪನಿಕ ದೂರು ನೀಡಿ ರಾಜ್ಯಪಾಲರು ಮತ್ತು ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಾರೆ. ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನ ಆದೇಶಗಳಿವೆ. ಟಿ.ಜೆ ಅಬ್ರಾಹಂ ಸಲ್ಲಿಸಿರುವ ಆಕ್ಷೇಪಣೆ ಗಮನಿಸಬೇಕು. 17A ಅಡಿ ಪೂರ್ವಾನುಮತಿ ಬೇಕಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ದಂಡ ವಿಧಿಸಬೇಕು ಎಂದು ವಾದ ಮಂಡಿಸಿದ್ದಾರೆ.


















