ಹೊಸಕೋಟೆ: ನಾಡಬಾಂಬ್ ಸುತ್ತುವಾಗ ಅದು ಸ್ಫೋಟಗೊಂಡ ಪರಿಣಾಮ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಳಾ ಗ್ರಾಮದ ಹತ್ತಿರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛಿದ್ರ ಛಿದ್ರವಾಗಿದೆ. ನಾಡ ಬಾಂಬ್ ಸುತ್ತುವಾಗ ಸ್ಫೋಟಗೊಂಡ ಪರಿಣಾಮ ಪವನ್(18) ಸಾವನ್ನಪ್ಪಿದ್ದಾನೆ.
ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಸಂಪೂರ್ಣ ಹಾನಿಯಾಗಿದೆ. ಘಟನೆಯಲ್ಲಿ ನಾಗೇಶ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಹಾಗೂ ಅಡಿಷನಲ್ ಎಸ್ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಕಾಡುಹಂದಿ ಬೇಟೆಗೆ ಬಳಸಲ್ಪಡುವ ಸ್ಫೋಟಕ ಇರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.