ಶಿವಮೊಗ್ಗ: ಕಾಮುಕ ಉಪನ್ಯಾಸಕನೊಬ್ಬ ತನ್ನ ಬಳಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಸಾಗರ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಪುನೀತ್ ಎಂಬ ಕಾಮುಕನೇ ತನ್ನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಿನಗೆ ಗೊತ್ತಿಲ್ಲದ ವಿಷಯಗಳನ್ನು ನಾನು ಸರಿಯಾಗಿ ಹೇಳಿಕೊಡುತ್ತೇನೆಂದು ವಿದ್ಯಾರ್ಥಿನಿಯ ನಂಬಿಕೆಯನ್ನು ಕಾಮುಕ ಉಪನ್ಯಾಸಕ ಗಳಿಸಿದ್ದಾನೆ.
ಆನಂತರ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯ ಕುಟುಂಬಸ್ಥರು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.