ಚನ್ನಪಟ್ಟಣ ಉಪ ಚುನಾವಣೆಯ ಕಾವು ಜೆಡಿಎಸ್ ಹಾಗೂ ಬಿಜೆಪಿ ದೋಸ್ತಿಯಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ. ಟಿಕೆಟ್ ಹಂಚಿಕೆಯ ವಿಷಯ ದೊಡ್ಡ ತಲೆ ನೋವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರ ಬಿಟ್ಟು ಕೊಡಲು ಜೆಡಿಎಸ್ ಒಪ್ಪುತ್ತಿಲ್ಲ ಎನ್ನಲಾಗಿದೆ.
ಹೀಗಾಗಿಯೇ ಜೆಡಿಎಸ್ (JDS) ಬಿಜೆಪಿ (BJP) ನಡುವೆ ಇದ್ದ ಟಿಕೆಟ್ ಗೊಂದಲಕ್ಕೆ ಬಹುತೇಕ ತೆರೆ ಬಿದ್ದಿದೆ ಎನ್ನಲಾಗುತ್ತಿದೆ. ಕ್ಷೇತ್ರ ಬಿಟ್ಟು ಕೊಡದಿರಲು ಜೆಡಿಎಸ್ ನಿರ್ಧಾರ ಮಾಡಿದ್ದು, ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಚನ್ನಪಟ್ಟಣದಿಂದ ಸಿಪಿ ಯೋಗೇಶ್ವರ್ ಗೆ ಟಿಕೆಟ್ ನೀಡುವ ಕುರಿತು ಬಿಜೆಪಿ ನಾಯಕರು ಕುಮಾರಸ್ವಾಮಿ ಮನವೊಲಿಕೆಗೆ ಮುಂದಾಗಿದ್ದರು. ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಹೇಳಿಕೆಯಿಂದ ತೀವ್ರ ಸಮಾಧಾನಗೊಂಡಿದ್ದಾರೆ. ಹೀಗಾಗಿ ಸಿಪಿವೈಗೆ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಮಾಡಲು ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್ ನಾಯಕರಿಂದ ಚನ್ನಪಟ್ಟಣ ಜೆಡಿಎಸ್ ಗೆ ಬಿಟ್ಟುಕೊಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ದರಿಂದ ಜೆಡಿಎಸ್ ನಿಂದ ಅಭ್ಯರ್ಥಿ ಕಣಗಿಳಿಸಿ ಮತ್ತೆ ಗೆಲುವಿನ ಬಾವುಟ ಹಾರಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಆದರೆ, ಟಿಕೆಟ್ ಸಿಗದಿದ್ದರೂ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದ ಯೋಗೇಶ್ವರ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ನೋಡಬೇಕಿದೆ.
ಮೈತ್ರಿ ಟಿಕೆಟ್ ಆಕಾಂಕ್ಷಿಗಳಾದ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್‌ನ ಎಚ್.ಸಿ. ಜಯಮುತ್ತು ಅವರು ಗೌರಿ ಗಣೇಶ ಹಬ್ಬಕ್ಕೆ ಸಾವಿರಾರು ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ. ಗೌರಿ ಗಣೇಶ ಹಬ್ಬದಂದು ಸಾವಿರ ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ. ಇದನ್ನು ಗಮನಿಸಿದರೆ, ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.