ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ..3ರಂದು ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಲೆನಾಡಿನಲ್ಲಿ ಹಗುರದಿಂದ ಹಾಗೂ ಒಳನಾಡಿನ ಸುತ್ತಮುತ್ತ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
ದಾವಣಗೆರೆ, ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಂಭವವಿದೆ.
ಸೆಪ್ಟೆಂಬರ್ 6 ರವರೆಗೆ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.