ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ರೇಣುಕಾಸ್ವಾಮಿ ಕೊಲೆಗೆ ಸಂಬಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಪೊಲೀಸರು ಎಲ್ಲವನ್ನೂ ವಿವರಿಸಿದ್ದಾರೆ.
ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಈಗ ವೈರಲ್ ಆಗಿದೆ. ಆ ಫೋಟೋ ನೋಡಿದರೆ, ಪ್ರತಿಯೊಬ್ಬರ ಕಣ್ಣಾಲೆ ತಂಪಾಗುವಂತಿದೆ. ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ. ಈ ಫೋಟೋದಲ್ಲಿ ಕೈ ಮುಗಿದು ರೇಣುಕಾಸ್ವಾಮಿ ಬಿಡುವಂತೆ ಅಂಗಲಾಚಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ ಗೆ ಅಪಹರಿಸಿಕೊಂಡು ಹೋಗಲಾಗಿತ್ತು. ಇದಕ್ಕೆಲ್ಲ ದರ್ಶನ್ ಕಾರಣ ಎನ್ನಲಾಗಿದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಎದುರಾಗಿದೆ. ರೇಣುಕಾಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್ ನಿಂದ ಆತ ಸಾವನ್ನಪ್ಪಿದ್ದಾನೆ. ಕೈ ಮುಗಿದು ಅಂಗಲಾಚಿದರೂ ಆರೋಪಿಗಳು ಬಿಟ್ಟಿಲ್ಲ ಎನ್ನಲಾಗಿದೆ.
ರೇಣುಕಾಸ್ವಾಮಿ ಅವರು ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಗೆ ಕೋಪ ಬಂದಿತ್ತು. ಆದರೆ, ಸಣ್ಣ ವಿಚಾರವನ್ನು ದೊಡ್ಡದು ಮಾಡಿ ಈಗ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲಾಗಿದೆ. ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ಅಷ್ಟೇ ಅಲ್ಲದೇ, ಶವವಾಗಿ ಬಿದ್ದಿರುವ ಫೋಟೋಗಳು ಕೂಡ ವೈರಲ್ ಆಗಿವೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ವಿಶೇಷ ಕೋರ್ಟ್ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.