ವಿಜಯಪುರ: ಜಾತ್ರೆಯ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಾತ್ರಾ ರಥೋತ್ಸವದ (Rathotsava) ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ (Youth) ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ (Devara Hipparagi) ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ದೇವೇಂದ್ರ ಬಡಿಗೇರ (24) ಸಾವನ್ನಪ್ಪಿದ ಯುವಕ. ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ರಥವನ್ನು ಎಳೆಯುವ ಸಂದರ್ಭದಲ್ಲಿ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.