ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಉತ್ತಮ ಶಿಕ್ಷಕರನ್ನು ಪುರಸ್ಕರಿಸಿ, ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಎಸ್. ಗೊಲ್ಲ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿನ ಖಾಸಗಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಯ್ದ ಉತ್ತಮ ಶಿಕ್ಷಕರನ್ನು ಗೌರವಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ. 28ರಂದು ಶನಿವಾರ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಬೆಂಗಳೂರು ಸೇರಿದಂತೆ ನಾಲ್ಕು ಶೈಕ್ಷಣಿಕ ವಿಭಾಗಗಳಿಗೆ ತಲಾ ಮೂವರು ಶಿಕ್ಷಕರಂತೆ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು. ಅಲ್ಲದೇ, ಬೆಂಗಳೂರು ನಗರದ ಮೂವರು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು. ಈ ಮೂಲಕ ರಾಜ್ಯದ 15 ಉತ್ತಮ ಖಾಸಗಿ ಶಾಲಾ ಶಿಕ್ಷಕರನ್ನು ಗೌರವಿಸಲಾಗುವುದು. ಪ್ರಶಸ್ತಿಯು ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಹೇಳಿದ್ದಾರೆ.
ಈ ಮೂಲಕ ರಾಜ್ಯದ ಖಾಸಗಿ ಶಾಲಾ ಶಿಕ್ಷಕರ ಜೀವನ ಮಟ್ಟ ಉತ್ತಮಗಳಿಸಲು ಸಹಕರಿಸಬೇಕು. ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ನಡೆಯುತ್ತಿದ್ದು, ಉತ್ತಮ ಶಿಕ್ಷಕರ ಹೆಸರನ್ನು ನಾಮ ನಿರ್ದೇಶನ ಮಾಡಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿಧಿ ಕೆ. ಮನವಿ ಮಾಡಿದ್ದಾರೆ.
ಉತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ