ಶಿವಮೊಗ್ಗ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ಮದ್ಯೆ ಮತ್ತೆ ಗಲಾಟೆ ನಡೆದಿದ್ದು, ಹಲವರನ್ನು ಬಂಧಿಸಲಾಗಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹತ್ತಿರದ ಅರಬಿಳಚಿ ಕ್ಯಾಂಪ್ ನಲ್ಲಿ ಈ ಘಟನೆ ನಡೆದಿದೆ. ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದ ಪರಿಣಾಮ 30ಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೊರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಡೊಳ್ಳು ಭಾರಿಸುವ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ಗಲಾಟೆ ವಿರುದ್ಧ ಎರಡು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮುಂಜಾಗ್ರತೆಗೆ ಅರಬಿಳಚಿ ಕ್ಯಾಂಪ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.