ತುಮಕೂರು: ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬಾಲಕಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹತ್ತಿರ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ.
ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹಾಗೂ ಎದುರು ಬರುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮಧುಗಿರಿ ಪಿಎಸ್ ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಕಾರುಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ.