ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಿಒಕೆ ಜನರಿಗೆ ಕರೆ ನೀಡಿದ್ದಾರೆ.
ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ ಎಂದು ಅವರು ಕರೆ ಕೊಟ್ಟಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಜನರಿಗೆ ಕರೆ ನೀಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಈ ರೀತಿ ಕರೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಕೇಶ್ ಸಿಂಗ್ ಠಾಕೂರ್ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಮಾತನಾಡಿದ ಅವರು, ಪಾಕ್ ಆಕ್ರಮಿತ ಕಾಶ್ಮೀರದ ನಿವಾಸಿಗಳನ್ನು ಪಾಕಿಸ್ತಾನ ಸರ್ಕಾರ ಕಡೆಗಣಿಸುತ್ತಿದೆ. ಆದರೆ ನಾವು ಭಾರತೀಯರು, ನಿಮ್ಮನ್ನು ನಮ್ಮವರು ಎಂದೇ ಭಾವಿಸುತ್ತೇವೆ. ಹೀಗಾಗಿ ಬಂದು ನಮ್ಮನ್ನು ಸೇರಿಕೊಳ್ಳಿ ಎಂದು ಕರೆ ನೀಡಿದ್ದಾರೆ.
ಅಧಿಕಾರಕ್ಕೆ ಬಂದರೆ ರದ್ದಾಗಿರುವ 370ನೇ ವಿಧಿ ಮರುಸ್ಥಾಪನೆಯ ಕುರಿತು ಭರವಸೆ ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಬಗ್ಗೆ ಕಿಡಿಕಾರಿರುವ ಸಿಂಗ್, ಬಿಜೆಪಿ ಇರುವವರೆಗೂ ಅದು ಸಾಧ್ಯವಾಗದ ಮಾತು ಎಂದು ಗುಡುಗಿದ್ದಾರೆ.