ಕೊಪ್ಪಳ: ಗೌಪ್ಯ ಮಾಹಿತಿ ಸೋರಿಕೆ ಮಾಡಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ.
ನಗರದ ಸಿಇಎನ್ ಠಾಣೆ ಹೆಡ್ ಕಾನ್ಸ್ ಟೇಬಲ್ ಕೊಟೇಪ್ಪ ಹಣಕ್ಕಾಗಿ ಮೊಬೈಲ್ ನಂಬರ್ ಗಳ ಸಿಡಿಆರ್, ಟವರ್ ಲೋಕೇಶನ್ ಗೌಪ್ಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಾಹಿತಿ ಬಹಿರಂಗಪಡಿಸಿದ ನಗರದ ಸಿಇಎನ್ ಠಾಣೆ ಹೆಡ್ ಕಾನ್ಸ್ ಟೇಬಲ್ ಕೋಟೆಪ್ಪ ವಿರುದ್ಧ ಸಿಇಎನ್ ಠಾಣೆಯ ಎಎಸ್ ಐ ಕೇಸ್ ದಾಖಲಿಸಿದ್ದಾರೆ. ಆದರೆ, ಎಫ್ ಐಆರ್ ದಾಖಲಾಗುತ್ತಿದ್ದಂತೆ ಕೊಟೇಪ್ ನಾಪತ್ತೆಯಾಗಿದ್ದಾರೆ. ಕಳೆದ 20 ದಿನಗಳಿಂದ ಕೋಟೆಪ್ಪ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಯಾವುದೇ ಮಾಹಿತಿ ನೀಡಲು ಮೇಲಧಿಕಾರಿಗಳ ಅನುಮತಿ ಕಡ್ಡಾಯ. ಆದರೆ ಹಣ ಪಡೆದು ಸಿಡಿಆರ್, ಟವರ್ ಲೋಕೇಶನ್ ಮಾಹಿತಿ ನೀಡುತ್ತಿದ್ದರು ಎನ್ನಲಾಗಿದೆ. ಕೋಟೆಪ್ಪ 145 ಮೊಬೈಲ್ ಸಿಡಿಆರ್, 9 ಟವರ್ ಡಂಪ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಎಫ್ ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾರೆ. ಸದ್ಯ ಆರೋಪಿ ಪೊಲೀಸಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.