ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಹೀಗಾಗಿ ಸಿಎಂಗೆ ತೀರ್ಪಿನ ಟೆನ್ಶನ್ ಶುರುವಾಗಿದೆ. ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯಪ್ರೇರಿತ. 17ಎ ಅಡಿ ಅನುಮತಿ ನೀಡುವ ವೇಳೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಸಚಿವ ಸಂಪುಟದ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದು ವಾದಿಸಿದ್ದಾರೆ.
ಈ ವೇಳೆ ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ಜಡ್ಜ್ ಕೇಳಿದ್ದಾರೆ. ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೇಕೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತ ಎಂದು ಹೇಳಲಾಗದು ಎಂದು ಮನು ಸಿಂಘ್ವಿ ವಾದಿಸಿದ್ದಾರೆ.