ಮೈಸೂರು: ಮುಸ್ಲಿಂರ ಹತ್ತಿರ ಇರುವ ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವೂ ಹಿಡಿಯುತ್ತೇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಂಡ್ಯದ ನಾಗಮಂಗಲ ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಂರ ಹತ್ತಿರ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ನಾವೂ ಕೈಯಲ್ಲಿ ಹಿಡಿದಾಗ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಉತ್ಸವ ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಾನು ಸಂಸದನಾಗಿದ್ದರೂ ಅಷ್ಟೇ ಆಗಿಲ್ಲದಿದ್ದರೂ ಅಷ್ಟೇ ತಾಯಿ ಚಾಮುಂಡಿಗೆ ಅವಮಾನವಾಗುವುದಕ್ಕೆ ಬಿಡುವುದಿಲ್ಲ. ಬೆಟ್ಟದಲ್ಲಿ ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ. ಯಾರ ನಿಲುವುಗಳು ಏನೇ ಇರಲಿ. ನಮ್ಮ ನಿಲುವು ಮಾತ್ರ ಒಂದೇ ಎಂದು ಗುಡುಗಿದ್ದಾರೆ.