ನವದೆಹಲಿ: ಜೈಲುಗಳು ನನ್ನನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ. ನನ್ನ ಸ್ಥೈರ್ಯ ಮುರಿಯಲು ಅವರು ನನ್ನನ್ನು ಜೈಲಿಗೆ ಅಟ್ಟಿದರು. ಆದರೆ, ದೇವರು ಯಾವಾಗಲೂ ನನ್ನೊಂದಿಗೆ ಇದ್ದಾನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.
ದೆಹಲಿ ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಜಾಮೀನು ನೀಡಿದ ನಂತರ ಕೇಜ್ರಿವಾಲ್ ಜೈಲಿನಿಂದ ಹೊರ ಬಂದಿದ್ದಾರೆ. ದೆಹಲಿ ಸಿಎಂ ಸುಮಾರು ಆರು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ ಶುಕ್ರವಾರ ತಿಹಾರ್ ಜೈಲಿನಿಂದ (Tihar Jail) ಜಾಮೀನು ಪಡೆದು ಹೊರ ಬಂದು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಳೆಯಲ್ಲಿಯೂ ನನ್ನನ್ನು ನೋಡಲು ಇಲ್ಲಿಗೆ ಆಗಮಿಸಿರುವ ಲಕ್ಷಾಂತರ ಕೋಟಿ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಅವರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಯಾರೂ ನನ್ನನ್ನು ಮುಟ್ಟಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಶತೃಗಳಿಂದಾಗಿ ನನ್ನ ನೈತಿಕತೆಯು 100 ಪಟ್ಟು ಹೆಚ್ಚಾಗಿದೆ. ನನ್ನ ಪ್ರತಿಯೊಂದು ರಕ್ತದ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ನಾನು ಕಷ್ಟಗಳನ್ನು ಎದುರಿಸಿದೆ ಆದರೆ ದೇವರು ಯಾವಾಗಲೂ ನನ್ನೊಂದಿಗೆ ಇದ್ದಾನೆ. ನನ್ನ ಸ್ಥೈರ್ಯವನ್ನು ಮುರಿಯಲು ಯಾರಿಂದಲೂ ಆಗುವುದಿಲ್ಲ ಎಂದು ಗುಡುಗಿದ್ದಾರೆ.