ಪ್ರಧಾನಿ ನರೇಂದ್ರ ಮೋದಿ(Narendra Modi) ಅವರಿಗೆ ಇಂದು 74ನೇ ಹುಟ್ಟ ಹಬ್ಬ ಆಚರಿಸಿಕೊಳ್ಳುತ್ತಿದ್ದು. ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17, 1950 ರಂದು ಗುಜರಾತ್ ನಲ್ಲಿ ಜನಿಸಿದ್ದರು. ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು 74ನೇ ಹುಟ್ಟ ಹಬ್ಬ ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮಾಡುವ ಅವರ ಕನಸು ಈಡೇರಲಿ ಎಂದು ಹಾರೈಸಿದ್ದಾರೆ. ನೀವು ದೀರ್ಘಾಯುಷ್ಯ ಮತ್ತು ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿಡುವಂತೆ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮುರ್ಮು ಬರೆದುಕೊಂಡಿದ್ದಾರೆ. ಅಲ್ಲದೇ, ಬಿಜೆಪಿ ಸೇರಿದಂತೆ ಹಲವಾರು ವಿಪಕ್ಷ ನಾಯಕರು, ಅಭಿಮಾನಿಗಳು ಹಾಗೂ ಭಾರತೀಯರು ಶುಭಾಶಯ ಕೋರುತ್ತಿದ್ದಾರೆ.
ತಮ್ಮ 74 ನೇ ಹುಟ್ಟು ಹಬ್ಬದಂದು, ಪ್ರಧಾನಿ ನರೇಂದ್ರ ಮೋದಿ ಅವರು ಭುವನೇಶ್ವರದ ಗಡಕಾನಾದಲ್ಲಿ 26 ಲಕ್ಷ ಪಿಎಂ ಆವಾಸ್ ಯೋಜನೆ ಮನೆಗಳನ್ನು ಉದ್ಘಾಟಿಸಲಿದ್ದಾರೆ. ರಾಜಕೀಯ ಜೀವನಕ್ಕೆ ಕಾಲಿಟ್ಟ ನಂತರ.2001 ರಿಂದ 2014 ರವರೆಗೆ ಸತತ ಮೂರು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಬೆಳವಣಿಗೆ ಮತ್ತು ಆಡಳಿತ ಸುಧಾರಣೆಗಳಿಂದ ಗುರುತಿಸಲ್ಪಟ್ಟಿದೆ. ನಂತರ 2014 ರಲ್ಲಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಈಗ ಅವರು ತಮ್ಮ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ನಡೆಸುತ್ತಿದ್ದಾರೆ.