ರಾಮನಗರ: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ (Munirathna) ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಮಧ್ಯೆ ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಅವರಿಗೆ ಸಂಕಷ್ಟ ಶುರುವಾಗಿದೆ.
ಹೀಗಾಗಿ ಕಾಂಗ್ರೆಸ್ ಗೆ ಈ ಪ್ರಕರಣ ಈಗ ಅಸ್ತ್ರವಾಗಿ ಸಿಕ್ಕಿದೆ. ಈ ಮಧ್ಯೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
R.R.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಂತ್ರಸ್ತೆ ಡಿವೈಎಸ್ಪಿ ದಿನಕರ್ ಶೆಟ್ಟಿ ಎದುರು 2 ಗಂಟೆಗೂ ಅಧಿಕ ಕಾಲ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆರ್.ಆರ್..ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದ್ದರೂ ಜಾತಿ ನಿಂದನೆ ಕೇಸ್ ನ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಕೋರ್ಟ್ ಜಾಮೀನು ನೀಡದರೆ, ಅವರು ಪರಪ್ಪನ ಅಗ್ರಹಾರದಿಂದ ಹೊರಗೆ ಬರಲಿದ್ದಾರೆ. ಇಲ್ಲವಾದರೆ, ಜೈಲೇ ಗತಿ ಎನ್ನಲಾಗುತ್ತಿದೆ. ಇದರ ಮಧ್ಯೆ ಅವರಿಗೆ ಈಗ ಅತ್ಯಾಚಾರ ಪ್ರಕರಣ ಕೂಡ ಸಂಕಷ್ಟ ತೊಂದೊಡ್ಡಿದೆ.