ದಾವಣಗೆರೆ: ನಾಗಮಂಗಲ ಕೋಮುಗಲಭೆ ಮಾಸುವ ಮುನ್ನವೇ ಮತ್ತೊಂದು ಘಟನೆ ವರದಿಯಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ.
ದಾವಣಗೆರೆ(Davanagere)ಯ ಬೇತೂರ ರಸ್ತೆಯಲ್ಲಿನ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅನ್ಯಕೋಮಿನ ಜನ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ, ಹಿಂದೂಗಳ ಮನೆಗಳನ್ನು ಟಾರ್ಗೆಟ್ ಮಾಡಿ ಕಲ್ಲು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಲ್ಲು ತೂರಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಕಲ್ಲು ತೂರಿದ ಕಿಡಿಗೇಡಿಗಳನ್ನ ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆಕಾರ್ಯ ನಡೆದಿದೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳನ್ನ ಪೊಲೀಸರು ಮುಚ್ಚಿಸಿದ್ದಾರೆ. ಶಾಂತಿ ಟಾಕೀಸ್ ರಸ್ತೆ ಹಾಗೂ ಎನ್ ಆರ್ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.