ಸಿಎಂ ಸಿದ್ದರಾಮಯ್ಯರನ್ನು ಮತ್ತೊಂದು ಸಂಕಷ್ಟಕ್ಕೆ ದೂಡಲು ಸಿದ್ಧತೆ!
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಸಿಲುಕಿಸಬೇಕೆಂಬ ಪ್ರಯತ್ನ ಜೋರಾಗಿದೆ. ಹೀಗಾಗಿ ಈ ಸಂಘರ್ಷಕ್ಕೆ ಸದ್ಯಕ್ಕೆ ನಿಲ್ಲುವುದಿಲ್ಲ ಎನ್ನಲಾಗುತ್ತಿದೆ. ಈಗ ಸಿಎಂಗೆ ರಾಜ್ಯಪಾಲರಿಂದ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಸಿಬಿಐ ಉಲ್ಲೇಖಿಸಿ ಮುಡಾ ಮತ್ತೊಂದು ಕೇಸ್ ನ ವಿವರಣೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಸಿಬಿಐ ಕುರಿತು ಉಲ್ಲೇಖಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈಗ ಮತ್ತೆ ಪತ್ರ ಬರೆದು ಶಾಕ್ ನೀಡಿದ್ದಾರೆ.
ಮುಡಾಗೆ ಸೇರಿದ ಮತ್ತೊಂದು ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಸಂಬಂಧಿಸಿದಂತೆ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ವರದಿಯನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ. ಸರ್ಕಾರವನ್ನು ಮತ್ತಷ್ಟು ಈಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಗರ್ವನರ್ ಮಾಡಲು ಯತ್ನಿಸುತ್ತಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್ ನಟರಾಜ್ ಎಂಬುವರು ಆಗಸ್ಟ್ 27 ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 5 ರಂದು ಪತ್ರ ಬರೆದಿದ್ದು, ಈಗ ಆ ಪತ್ರ ಬಹಿರಂಗವಾಗಿದೆ.
ಮೈಸೂರಿನ ಪಿಎಸ್ ನಟರಾಜ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ 387 ಕೋಟಿ ರೂ.ಗಳ ಕಾಮಗಾರಿ ಹಮ್ಮಿಕೊಂಡಿತ್ತು ಎಂದು ಉಲ್ಲೇಖಿಸಲಾಗಿದೆ ಎಂದು ರಾಜ್ಯಪಾಲರ ಪತ್ರದಲ್ಲಿ ಬರೆಯಲಾಗಿದೆ. ಈ ಮೂಲಕ ಪ್ರಾಧಿಕಾರ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಸಿಬಿಐನಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ವಿರುದ್ಧ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿರುವುದರಿಂದ, ಆದಷ್ಟು ಬೇಗ ಈ ವಿಷಯವನ್ನು ಪರಿಶೀಲಿಸಲು ಮತ್ತು ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸದ್ಯ ಈ ಪತ್ರ ಸಿಎಂಗೆ ಮತ್ತಷ್ಟು ತಲೆನೋವು ತಂದಂತಾಗಿದೆ.