ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಶಾಸಕ ಮುನಿರತ್ನ ಪ್ರಕರಣದ ಕುರಿತು ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಸ್ ಐಟಿ ತನಿಖೆಗೆ ವಹಿಸುವಂತೆ ಕೆಲವು ಸಚಿವರು ಹಾಗೂ ಶಾಸಕರ ಮನವಿ ಮಾಡಿದ್ದಾರೆ. ಮುನಿರತ್ನ ವಿರುದ್ಧ ಗಂಭೀರ ಪ್ರಕರಣಗಳಿವೆ. ಹೀಗಾಗಿ ವಿಶೇಷ ತನಿಖಾ ತಂಡದ ಅಗತ್ಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಮನವಿ ಆಧರಿಸಿ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಈ ಕುರಿತು ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಪ್ರಕರಣಗಳು ಎರಡು ವರದಿಯಾಗಿವೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ಡಿನೋಟಿಫಿಕೇಷನ್ ಕುರಿತು ಸಚಿವರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ನಾನು ಆ ದಾಖಲೆಗಳನ್ನು ಪರಿಶೀಲಿಸುತ್ತೇನೆ. ಆ ಭೂಮಿ ಕುಮಾರಸ್ವಾಮಿ ಭಾಮೈದನಿಗೆ ರಿಜಿಸ್ಟರ್ ಮಾಡಲಾಗಿದೆ.
ಅತ್ತೆಗೆ ಹಲವಾರು ಜಿಪಿಎ ಮಾಡಿಕೊಟ್ಟಿದ್ದಾರೆ. ಇದು ಬಹಳ ಗಂಭೀರವಾದ ಪ್ರಕರಣವಾಗಿದೆ. ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ತಮ್ಮ ಮೇಲಿನ ಎಲ್ಲಾ ಆರೋಪಗಳು ಹಿಟ್ ಅಂಡ್ ರನ್ ರೀತಿ ಮಾಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.