ದಾವಣಗೆರೆ: ಬಾರ್ ಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ಕೆಟಿಜೆ ನಗರದ ಬಾರ್ ವೊಂದರಲ್ಲಿ ನಡೆದಿದೆ. ಬಾರ್ ಗೆ ಏಕಾಏಕಿ ನುಗ್ಗಿದ ವ್ಯಕ್ತಿಯೋರ್ವ ಮದ್ಯ ಸೇವಿಸುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ.
ಗೌತಮ್ ಎಂಬ ವ್ಯಕ್ತಿ ಕುಮಾರ್ (36) ಎಂಬ ವ್ಯಕ್ತಿಗೆ ಚಾಕು ಇರಿದಿದ್ದಾನೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ನನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರು. ಆದರೆ, ಮಾರ್ಗ ಮಧ್ಯೆ ಕುಮಾರ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಗೌತಮ್ ಚಾಕುವಿನಿಂದ ಚುಚ್ಚಿ ಕೊಲೆ ಮಾಡುವ ದೃಶ್ಯ ಬಾರ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ, ಘಟನೆಗೆ ನಿಖರ ಕಾಣ ತಿಳಿದು ಬಂದಿಲ್ಲ. ಸದ್ಯ ಗೌತಮ್ ನನ್ನು ಕೆಟಿಜೆನಗರ ಠಾಣೆ ಪೊಲೀಸರು ಬಂಧಿಸಿ, ತನಿಖೆ ನಡೆಸಿದ್ದಾರೆ.