ಲೆಬನಾನ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಕನಿಷ್ಠ 100 ಜನ ಸಾವನ್ನಪ್ಪಿ, 400ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಸೋಮವಾರ ಬೆಳಿಗ್ಗೆಯಿಂದ ದಕ್ಷಿಣದ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಶತ್ರುಗಳ ದಾಳಿಗಳು ನಡೆದಿವೆ. ದಾಳಿಯಲ್ಲಿ 100 ಜನ ಸಾವನ್ನಪ್ಪಿ, 400ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ನಾವು ಲೆಬನಾನ್‌ನಲ್ಲಿ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತಿದ್ದೇವೆ. ಉತ್ತರದ ನಿವಾಸಿಗಳನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸುವ ನಮ್ಮ ಗುರಿಯನ್ನು ಸಾಧಿಸುವವರೆಗೆ ಕ್ರಮಗಳು ಮುಂದುವರಿಯುತ್ತವೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಇಂದು ತಮ್ಮ ಕಚೇರಿ ಪ್ರಕಟಿಸಿದ ವೀಡಿಯೊದಲ್ಲಿ ಹೇಳಿದ್ದಾರೆ.
ಇಸ್ರೇಲ್‌ನ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಮತ್ತು ವೈದ್ಯರು ಸೇರಿದಂತೆ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ ಮತ್ತು 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.