ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸದ್ಯ ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಎದುರು ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಹುಬ್ಬಳ್ಳಿಯ ಅರವಿಂದ ನಗರ ಬಳಿ ಇರುವ ಬಿಜೆಪಿ ಕಚೇರಿ ಬಳಿ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಕೋರ್ಟ್‌ಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಅಲ್ಲಿಯವರೆಗೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ.