ದಕ್ಷಿಣ ಕನ್ನಡ : ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆಂಬ ಕಾರಣಕ್ಕೆ ಹಿಂದೂ ಸಂಘಟನೆಯ ಯುವಕರನ್ನು ಬಂಧಿಸಲಾಗಿದೆ.
ಇಬ್ಬರು ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ಸುಳ್ಯ ಬಸ್ ನಿಲ್ದಾಣದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಮೆರವಣಿಗೆಯ ಮೂಲಕ ಗಾಂಧಿ ನಗರ ಕಲ್ಕುಡ ದೇವಸ್ಥಾನಕ್ಕೆ ತೆರಲಿ ಪೂಜೆ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷತ್ ಸಂಚಾಲಕ ಸೋಮಶೇಖರ ಪೈಕ ಹಾಗೂ ನ.ಪಂ. ಸದಸ್ಯ ವಿನಯ ಕುಮಾರ ಕಂದಡ್ಕ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಮೆರವಣಿಗೆ ಮೂಲಕ ಸುಳ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಶಾಸಕಿ ಭಾಗೀರಥಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘಟನೆ ಖಂಡಿಸಿದರು.
ಎ. ವಿ. ತೀರ್ಥ ರಾಮ, ಶಾಸಕಿ ಭಾಗೀರಥಿ ಮುರುಳ್ಯ, ನವೀನ್ ನೆರಿಯ, ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ, ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಶೀಲಾ ಕುರುಂಜಿ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಸುಭೋದ್ ಶೆಟ್ಟಿ ಮೇನಾಲ, ಸಂತೋಷ್ ಕುತ್ತಮೊಟ್ಟೆ, ವಿಕ್ರಮ ಅಡ್ಪಂಗಾಯ, ಎ. ಟಿ. ಕುಸುಮಾಧರ, ಜಗನ್ನಾಥ ಜಯನಗರ, ನಾರಾಯಣ ಶಾಂತಿನಗರ ಸೇರಿದಂತೆ ಹಲವರು ಇದ್ದರು.