ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಅ. 5ರಂದು 17ನೇ ಕಂತಿನ ಹಣ ಜಮಾ ಆಗಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಈ ಯೋಜನೆಯಡಿ ವರ್ಷಕ್ಕೆ ಮೂರು ಬಾರಿ ಕೇಂದ್ರ ಸರ್ಕಾರದಿಂದ ಹಣ ಹಾಕಲಾಗುತ್ತದೆ. ಈಗ ಮುಂದಿನ ಕಂತು 5ಕ್ಕೆ ಸಿಗಲಿದೆ. ಇಲ್ಲಿಯವರೆಗೆ ಈ ಯೋಜನೆಯಡಿ ಇಲ್ಲಿಯವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈಗ ಅ. 5ರಂದು 18ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಈ ಯೋಜನೆ 2019ರಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಯೋಜನೆ ಆರಂಭಿಸಿದ್ದಾರೆ.
ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6 ಸಾವಿರ ರೂ. ಹಣವನ್ನು ಸಹಾಯಧನವಾಗಿ ನೀಡಲಾಗುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2 ಸಾವಿರ ಹಣ ರೈತರ ಖಾತೆಗೆ ಜಮಾ ಆಗುತ್ತದೆ. ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್ ಗೆ ಅರ್ಹರಾಗಿರುತ್ತಾರೆ.