ಕಾನ್ಪುರ: ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಸರಣಿ ಮಳೆಗೆ ಆಹುತಿಯಾಗಿದ್ದು, ಕೇವಲ 35 ಓವರ್ ಗಳನ್ನು ಮಾತ್ರ ಪಂದ್ಯ ಕಂಡಿದೆ.
ದಿನದ ಅಂತ್ಯಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ 3 ವಿಕೆಟ್ ಕಳೆದುಕೊಂಡು 107 ರನ್ ಗಳಿಸಿದೆ. ಆದರೆ, ಮೊದಲು ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಪಡೆದಿದ್ದು ವಿಶೇಷವಾಗಿದೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ (rohit sharma) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 2015ರ ನಂತರ ಇದೇ ಮೊದಲ ಬಾರಿಗೆ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿದ್ದಾರೆ.
2015 ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಅಂದಿನ ನಾಯಕ ವಿರಾಟ್ ಕೊಹ್ಲಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದ್ದರು. ಇದಾದ 9 ವರ್ಷಗಳ ನಂತರ ರೋಹಿತ್ ಶರ್ಮಾ ಈ ಕಾರ್ಯ ಮಾಡಿದ್ದಾರೆ. ಇದಕ್ಕೂ ಮುನ್ನ 1964ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು.
ಎರಡನೇ ಪಂದ್ಯದಲ್ಲಿ ಭಾರತ ತಂಡ ಮೂವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸಿದೆ. ಆದರೆ, ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ತಂಡವನ್ನೇ ಇಲ್ಲೂ ಕೂಡ ಮುಂದುವರೆಸಲಾಗಿದ್ದು, ರೋಹಿತ್ ಶರ್ಮ ಎಲ್ಲರಿಗೂ ಅಚ್ಚರಿ ಉಂಟು ಮಾಡಿದ್ದಾರೆ. ಆದರೆ, ಮೊದಲ ಟೆಸ್ಟ್ ನ ಮೊದಲ ದಿನ ಮಳೆಗೆ ಆಹುತಿಯಾಗಿದೆ. ಹೀಗಾಗಿ ಎರಡೂ ತಂಡಕ್ಕೆ ಹಿನ್ನಡೆಯಾಗುವಂತಾಗಿದೆ.