ಮಂಡ್ಯ: ಜಿಲ್ಲೆಯ ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಎಲ್ಲ 55 ಜನ ಆರೋಪಿಗಳಿಗೆ ಜಾಮೀಮು ಮಂಜೂರಾಗಿದೆ.
ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೋಮುಗಲಭೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಸಮುದಾಯದವರನ್ನು ಬಂಧಿಸಿದ್ದರು. ಈಗ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ನಿಂದ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳು ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ಎಲ್ಲ ಆರೋಪಿಗಳು ಸೆ. 11ರಂದು ಅರೆಸ್ಟ್ ಆಗಿದ್ದರು. ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಇಡೀ ರಾಜ್ಯದಲ್ಲಿ ದೊಡ್ಡ ಆಕ್ರೋಶ ವ್ಯಕ್ತವಾಗಿತ್ತು.
ರಾಜಕೀಯ ನಾಯಕರು ಬೇಳೆ ಬೇಯಿಸಿಕೊಳ್ಳಲು ಆರಂಭಿಸಿದ್ದರು. ಆಡಳಿತರೂಢ ಹಾಗೂ ವಿರೋಧ ಪಕ್ಷಗಳ ಮಧ್ಯೆ ವಾಕ್ಸಮರ ನಡೆದಿತ್ತು. ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಘಟನೆಯಲ್ಲಿ ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿದ್ದವು. ಬರೋಬ್ಬರಿ 26 ಅಂಗಡಿಗಳು ಸುಟ್ಟು ಭಸ್ಮವಾಗಿದ್ದವು.
ಹಲವರು ಇನ್ನೂ ತಲೆ ಮರೆಸಿಕೊಂಡಿದ್ದು, ಘಟನೆ ನಡೆದುರ 15 ದಿನ ಕಳೆದರೂ ಮನೆಗೆ ಬಂದಿರಲಿಲ್ಲ. ಈ ಘಟನೆಯಲ್ಲಿ ಆರೋಪಿಯಾಗಿದ್ದ ಯುವಕ ಕಿರಣ್ ಎಂಬಾತ ಬಂಧನ ಭೀತಿಯಲ್ಲಿ ಬ್ರೈನ್ ಸ್ಟ್ರೋಕ್ ಬಲಿಯಾಗಿದ್ದ. ನಷ್ಟ ಹೊಂದಿದವರಿಗೆ ಸರ್ಕಾರ ಸಹಾಯ ಧನ ನೀಡಿತ್ತು. ವೈಯಕ್ತಿಕವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಸಹಾಯಧನ ನೀಡಿದ್ದರು. ಈಗ ಪ್ರಕರಣದ ಆರೋಪಿಗಳಿಗೆ ಬೇಲ್