ಬೆಳಗಾವಿ: ಕರ್ನಾಟಕದಲ್ಲಿ ಹಿಂದೂ ರಾಜ್ಯ ತರೋಣ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿವಾಜಿ, ಕಿತ್ತೂರು ಚೆನ್ನಮ್ಮ, ಬೆಳವಡಿ ಮಲ್ಲಮ್ಮರಂತೆ ಆಡಳಿತ ಮಾಡೋಣ. ಸಾವು ಖಚಿತ. ಹೀಗಾಗಿ ಸಾಯೋದರಲ್ಲಿ ನಾನು ನಾಲ್ಕು ಹೊಡೆದೇ ಹೋಗುತ್ತೇನೆ ಎಂದು ಹೇಳಿದ್ದಾರೆ.
ನಾನು ರಾಜ್ಯದ ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ನೀಡುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಒಂದೇ ಒಂದು ಕಲ್ಲು ಬಿದ್ದರೂ ಸೀದಾ ಜನ್ನತ್. ಪ್ರಧಾನಿ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂದು ಹೇಳುತ್ತಾರೆ. ಆದರೆ ನಮ್ಮ ಮಾತು ಬದಲಾಗುತ್ತದೆ. ಹಿಂದೂವೋಂಕೆ ಸಾಥ್, ಹಿಂದೂವೋಂಕೆ ವಿಕಾಸ್, ದೇಶ ದ್ರೋಹಿಯೋಂಕೋ ಲಾಥ್ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಕುಂಕುಮ ಹಚ್ಚಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಸಿದ್ದರಾಮಯ್ಯ ತಲೆಗೆ ಪೇಟ ಇಟ್ಟರೆ ಕಿತ್ತು ಹಾಕುತ್ತಿದ್ದರು. ಈಗ ಯಾಕೆ ಚಾಮುಂಡಿ ದರ್ಶನಕ್ಕೆ ಹೋಗುತ್ತೀರಿ? ಸಿದ್ದರಾಮಯ್ಯ ಹಿಂದೂ ದೇವಸ್ಥಾನಕ್ಕೆ ಹೋಗಿ, ಮುಸ್ಲಿಂ ಪರ ಕೆಲಸ ಮಾಡುತ್ತಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ನುಂಗಿ ನೀರು ಕುಡಿದ್ರಿ. ಹಾಲುಮತದ ಸಮುದಾಯಕ್ಕೆ ಏನೂ ಮಾಡಿಲ್ಲ. ಆದರೆ ಮುಸ್ಲಿಂರಿಗೆ 10 ಸಾವಿರ ಕೋಟಿ ನೀಡುತ್ತೇವೆ ಎಂದು ಹೇಳುತ್ತಾರೆ. ಯಾರ ಅಪ್ಪನ ಮನೆಯಿಂದ ಹಣ ಕೊಡುತ್ತೀರಿ ಎಂದು ಗುಡುಗಿದ್ದಾರೆ.