ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿತಿಯನ್ನು ಪ್ರದಾನಿ ನರೇಂದ್ರ ವಿಚಾರಿಸಿದ್ದಾರೆ.
ಕರೆ ಮಾಡಿ ಪ್ರದಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಭಾನುವಾರ ತೆರೆ ಬಿದ್ದಿತು. ಅಂದು ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದ ವೇಳೆ, ಅಸ್ವಸ್ಥಗೊಂಡಿದ್ದರು. ಆಗ ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಈಗ 83 ವರ್ಷ.
ಮೋದಿಯನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದಿದ್ದರು.
ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥರಾಗಿದ್ದ ಖರ್ಗೆ ಅವರನ್ನು ಕೆಲವು ಹೊತ್ತು ವೇದಿಕೆ ಮೇಲೆಯೇ ಕೂರಿಸಲಾಗಿತ್ತು. ಆನಂತರ ಅವರು ತಮ್ಮ ಭಾಷಣ ಮುಂದುವರೆಸಿದ್ದರು.