ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಷರ್ಷವನ್ನೇ ಸೃಷ್ಟಿ ಮಾಡಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಬೇಕೆಂದು ಮುಡಾ ವಿಚಾರವನ್ನು ವಿರೋಧಿಗಳು ಮುಂದಿಟ್ಟುಕೊಂಡಿದ್ದಾರೆ. ಈಗಾಗಲೇ ಅವರ ವಿರುದ್ಧ ಲೋಕಾಯುಕ್ತ, ಇಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಈ ಮಧ್ಯೆ ಸಿಎಂ ಪತ್ನಿ ಸೈಟ್ ಗಳನ್ನು ಮರಳಿ ಮುಡಾಗೆ ನೀಡಿದ್ದಾರೆ.
ಮೈಸೂರು ಜಿಲ್ಲೆಯ ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಸ್ವಾಧೀನಪಡಿಸಿಕೊಂಡಿದ್ದಕ್ಕೆ ಪರಿಹಾರ ರೂಪದಲ್ಲಿ ನಗರದ ಪ್ರತಿಷ್ಠಿತ ಬಡಾವಣೆ ವಿಜಯ ನಗರದಲ್ಲಿ 14 ಸೈಟ್ ಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಇದೇ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಸಿಎಂ ಕುರ್ಚಿಗೂ ಕಂಟಕ ತಂದಿತ್ತು. ಈ ಮಧ್ಯೆ ಸಿಎಂ ಅವರ ಪತ್ನಿ ಪಡೆದುಕೊಂಡ ಎಲ್ಲ 14 ಸೈಟುಗಳನ್ನು ಮರಳಿ ನೀಡಿದ್ದಾರೆ.
ಮರಳಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಈಗ ಪ್ರಕರಣ ಮತ್ತೊಂದು ತಿರುವು ಪಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಈಗಾಗಲೇ ಎಫ್ ಐಆರ್ ದಾಖಲಾಗಿದೆ. ಎ 1 ಆರೋಪಿಯಾದರೆ, ಪತ್ನಿ ಪಾರ್ವತಿ ಎ 2 ಆರೋಪಿಯಾಗಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಇ.ಡಿಯಲ್ಲೂ ಸಿದ್ದರಾಮಯ್ಯ ವಿರುದ್ಧ ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿತ್ತು.
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ಸೈಟ್ ಗಳನ್ನು ಮರಳಿ ನೀಡುವುದಾಗಿ ಮುಡಾಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ. ಅಲ್ಲದೇ, ಸೈಟ್ ಗಳನ್ನು ಮರಳಿ ನೀಡುತ್ತಿರುವ ಹಿಂದಿನ ವಿಷಯವನ್ನು ಕೂಡ ಅವರು ಉಲ್ಲೇಖಿಸಿದ್ದಾರೆ.
ಈ ಮಧ್ಯೆ ಪತ್ನಿಯ ನಿರ್ಧಾರ ನನಗೆ ಆಶ್ಚರ್ಯ ತಂದಿದೆ. ಪತ್ನಿಯ ಹಿಂತಿರುಗಿಸುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಆದರೆ, ವಿಪಕ್ಷಗಳು ಮಾತ್ರ ಸೈಟ್ ಗಳನ್ನು ಮರಳಿ ನೀಡಿ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಹೀಗಾಗಿ ಸಿಎಂ ತಪ್ಪು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಹೀಗಾಗಿ 14 ಸೈಟ್‌ಗಳನ್ನು ವಾಪಸ್ ಮಾಡಿರುವುದರಿಂದ ಬೀಸೋ ದೊಣ್ಣೆಯಿಂದ ಸಿದ್ದರಾಮಯ್ಯ ಪಾರಾಗುತ್ತಾರಾ? ಎಂಬುವುದನ್ನು ಕಾಯ್ದು ನೋಡಬೇಕಿದೆ.