ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಎರಡೂ ಪಂದ್ಯಗಳಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಭಾರತ ತಂಡದ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದಿದ್ದಾರೆ.
2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೈಸ್ವಾಲ್ ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಈ ಸಿಡಿಲಬ್ಬರದ ಅರ್ಧ ಶತಕದೊಂದಿಗೆ ಮಾಜಿ ವಿರೇಂದ್ರ ಸೆಹ್ವಾಗ್ ಅವರ ದಾಖಲೆ ಮುರಿದಿದ್ದಾರೆ.
ಈ ಅರ್ಧ ಶತಕವನ್ನು ಕೇವಲ 31 ಎಸೆತಗಳಲ್ಲಿ ಪೂರೈಸಿದ್ದರು. ಇದರೊಂದಿಗೆ ಭಾರತ ತಂಡದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗದ ಅರ್ಧಶತಕ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. 2008 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೆಹ್ವಾಗ್ ಕೇವಲ 32 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ್ದರು. ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ ಆಟಗಾರ ಎಂದು ಜೈಸ್ವಾಲ್ ದಾಖಲೆ ಮಾಡಿದ್ದಾರೆ.
2ನೇ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ 45 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ ಗಳೊಂದಿಗೆ 51 ರನ್ ಗಳಿಸಿದ್ದರು. ಈ ಮೂಲಕ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಎರಡು ಇನಿಂಗ್ಸ್ಗಳಲ್ಲಿ 100ರ ಸ್ಟ್ರೈಕ್ ರೇಟ್ನಲ್ಲಿ 50+ ರನ್ ಗಳಿಸಿದ ವಿಶೇಷ ದಾಖಲೆ ಸೆಹ್ವಾಗ್ ಹೆಸರಿನಲ್ಲಿತ್ತು.
2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸೆಹ್ವಾಗ್ ಎರಡು ಇನಿಂಗ್ಸ್ ಗಳಲ್ಲಿ ಕ್ರಮವಾಗಿ 55(46) ಮತ್ತು 55(55) ರನ್ ಗಳಿಸಿದ್ದರು. ಈಗ ಜೈಸ್ವಾಲ್ 72(51), 51(45) ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಅಂಗಳದಲ್ಲಿ ಕಡಿಮೆ ಬೌಲ್ ಗೆ ಅರ್ಧ ಶತಕ ಸಿಡಿಸಿದ ದಾಖಲೆ ರಿಷಬ್ ಪಂತ್ ಹೆಸರಿನಲ್ಲಿದೆ.