ಬೆಂಗಳೂರು: ಕೊಲೆ ಪ್ರಕರಣದಲ್ಲಿ ಇದ್ದ ವ್ಯಕ್ತಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಹೀಗಿರುವಾಗ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಸಹಕಾರಿ ಸಚಿವ ಕೆ ಎ ನ್ ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರ ಮೇಲೆ ಆರೋಪಗಳು ಬಂದಾಗ ಎಷ್ಟು ಜನ ರಾಜೀನಾಮೆ ನೀಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೊಲೆ ಪ್ರಕರಣದಲ್ಲಿ ಭಾಗಿಯಾದವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಂತವರ ರಾಜೀನಾಮೆಯನ್ನು ಬಿಜೆಪಿಯವರು ಕೇಳುತ್ತಿಲ್ಲ ಎಂದು ಗುಡುಗಿದ್ದಾರೆ.
ಸಿದ್ದರಾಮಯ್ಯ ರಾಜಕೀಯದಲ್ಲಿ ಇರೋವರೆಗೂ ಬಿಜೆಪಿಗರಿಗೆ ರಾಜಕೀಯ ಭವಿಷ್ಯ ಇಲ್ಲ. ಸಿದ್ದರಾಮಯ್ಯ ಇರೋವರೆಗೆ ಕಾಂಗ್ರೆಸ್ ಪಕ್ಷ ಶಕ್ತಿಯುತವಾಗಿರುತ್ತದೆ ಎಂದು ಗುಡುಗಿದ್ದಾರೆ.