ಬೆಂಗಳೂರು: ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಸದ್ಯ ಎಸ್ ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ವಿಚಾರಣೆಯ ಭಾಗವಾಗಿ ಇತ್ತೀಚೆಗಷ್ಟೇ ಅಧಿಕಾರಿಗಳು ಮುನಿರತ್ನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಈ ವೇಳೆ ಲ್ಯಾಪ್ ಟಾಪ್, ಪೆನ್ ಡ್ರೈವ್ ಗಳಲ್ಲಿ ಕೆಲವು ರಾಜಕೀಯ ನಾಯಕರ ಖಾಸಗಿ ಕ್ಷಣಗಳ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಅತ್ಯಾಚಾರ, ಸುಲಿಗೆ, ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇತ್ತೀಚೆಗಷ್ಟೇ ಮುನಿರತ್ನ ಮನೆ ಸೇರಿದಂತೆ 12ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.
ಮುನಿರತ್ನ ಮನೆಯಲ್ಲಿ ಪತ್ತೆಯಾದ ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಗಳು ಸೇರಿದಂತೆ ಕೆಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಪೆನ್ ಡ್ರೈವ್ ಹಾಗೂ ಲ್ಯಾಪ್ ಟಾಪ್ ಗಳಲ್ಲಿ ರಾಜಕೀಯ ನಾಯಕರು ಹಾಗೂ ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಅಲ್ಲದೆ, ಮಹಿಳೆಯರ ಅಶ್ಲೀಲ ವಿಡಿಯೋಗಳು ಇವೆ ಎನ್ನಲಾಗಿದೆ. ಈ ವಿಡಿಯೋಗಳನ್ನು ಇರಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಡಿಯೋಗಳ ಅಸಲಿಯತ್ತು ಪರೀಕ್ಷೆಗಾಗಿ ಪೆನ್ ಡ್ರೈವ್ ಹಾಗೂ ಲ್ಯಾಪ್ ಟಾಪ್ ಗಳನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.