ಬೆಂಗಳೂರು: ಮುಡಾ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದ್ದಕ್ಕೆ ನಾನು ರಾಜೀನಾಮೆ ಕೇಳಿಲ್ಲ. ಅಧಿಕಾರ ದುರುಪಯೋಗ ಪಡಿಸಿದಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ಮೂಲಕ ಸಾಕ್ಷಿಗಳನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ. ಎಫ್ ಐಆರ್ ನನ್ನ ವಿರುದ್ಧವೂ ಇದೆ. ನಾನು ಎಲ್ಲಿಯಾದರೂ ಹಣ ತೆಗೆದುಕೊಂಡಿದ್ದೇನಾ? ನಾನು ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದೇನೆ. ಭ್ರಷ್ಟಾಚಾರ ಮಾಡಿಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಪ್ ಐಆರ್ ಆದವರು ರಾಜೀನಾಮೆ ನೀಡಬೇಕಾದರೆ, ಜೆಡಿಎಸ್ ನ ಎಲ್ಲರೂ ನೀಡುತ್ತಾರೆ ಎಂದು ಗುಡುಗಿದ್ದರು. ಇದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.
ಅಲ್ಲದೇ, ವಿಜಯ್ ಟಾಟಾ ದೂರು ನೀಡಿರುವ ಕುರಿತು ಮಾತನಾಡಿದ ಕುಮಾರಸ್ವಾಮಿ, ನನ್ನ ವಿರುದ್ಧ ದೂರು ಕೊಡಲಿ, ನಾನು ಯಾವ ವಿಚಾರಕ್ಕೂ ಚರ್ಚೆ ಮಾಡಿಲ್ಲ. ಬೀದಿಯಲ್ಲಿನ ನಾಯಿ- ನರಿಗೆ ಉತ್ತರ ಕೊಡಲು ಆಗುವುದಿಲ್ಲ ಎಂದು ಗುಡುಗಿದ್ದಾರೆ.