ಯಾದಗಿರಿ: ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರ ವಿರುದ್ಧ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಸರಾ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಆ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರಗಳು ಪ್ರಸ್ತಾಪ ಆಗಬಾರದಿತ್ತು ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಏನೂ ತಪ್ಪು ಮಾಡಿಲ್ಲ ಅಂತಾರೆ. ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಕಿಡಿಕಾರಿದ್ದಾರೆ.
ನಾಡಹಬ್ಬ ದಸರಾ ವೇದಿಕೆ ರಾಜಕೀಯಕ್ಕೆ ಬಳಕೆ ಆಗಿರೋದು ತಪ್ಪು. ಶಾಸಕ ಜಿಟಿ ದೇವೇಗೌಡ ಆಗಿರಬಹುದು ಅಥವಾ ಇನ್ನೊಬ್ಬರು ಆಗಿರಬಹುದು ಅದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.