ಮೈಸೂರು: ಇಮ್ಮಾವು ಗ್ರಾಮದಲ್ಲಿ (Immavu Village )160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ (Mysuru Film City) ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನಾನು ಈ ಹಿಂದೆ ಸಿಎಂ ಆಗಿದ್ದಾಗ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿತ್ತು. ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಈ ಪ್ರದೇಶದಲ್ಲಿ ಮೂರು ವರ್ಷದೊಳಗೆ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕು. ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 04ರಿಂದ 10ರವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿವೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳಬೇಕು ಎಂದಿದ್ದಾರೆ.