ರಾಮನಗರ: ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರಕ್ಕೆ 300 ಕೋಟಿ ರೂ. ಹಣ ಮಂಜೂರಾತಿ ಮಾಡಿಸಿದ್ದೇನೆ. ಈ ಮೂಲಕ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ. ಮಾಕಳಿಯಲ್ಲಿ ಮನೆಗಳ ಅನುದಾನಕ್ಕೆ 2.16 ಕೋಟಿ ರೂ. ಹಣ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸಿಎಸ್ ಆರ್ ಫಂಡ್ ನಿಂದ ಒಂದು ಒಳ್ಳೆಯ ಶಾಲೆ ಕಟ್ಟಿದ್ದೇನೆ. ಕೆಲಸ ಮಾಡುವುದಕ್ಕೆ ಹೆಚ್ಚು ಶಕ್ತಿ ಕೊಡಬೇಕು. ನಾನು ನಿಮ್ಮ ಉಸ್ತುವಾರಿ ಸಚಿವ. 20 ಸಲ ಕ್ಷೇತ್ರಕ್ಕೆ ಬಂದಿದ್ದೇನೆ. ನಿಮ್ಮ ಕ್ಷೇತ್ರದ ಶಾಸಕರು ಅಷ್ಟು ಸಲ ನಿಮ್ಮ ಬಳಿ ಬಂದಿಲ್ಲ ಎಂದು ಹೇಳಿದ್ದಾರೆ.
ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಇಂದು ಚನ್ನಪಟ್ಟಣ ತಾಲೂಕು ನಾಗವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗವಾರ ಗ್ರಾಮ, ಚಿಕ್ಕೇನಹಳ್ಳಿ ಮತ್ತು ಮೊಗೇನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದಿದ್ದಾರೆ.