ಬೈಂದೂರು : ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ಕೆ.ಬಾಬು ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಜಗದಾಂಬಿಕಾ ವಸತಿ ಗ್ರಹದ ಆಡಳಿತ ಮಂಡಳಿ ಸಂಕೀರ್ಣದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಕೆ.ಬಾಬು ಶೆಟ್ಟಿ ತಗ್ಗರ್ಸೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ತಂತ್ರಿಯಾಗಿ ನಿತ್ಯಾನಂದ ಅಡಿಗ, ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ್ ಮೆಟ್ಟಿನಹೊಳೆ ಕಾಲ್ತೋಡು, ಧನಾಕ್ಷಿ ವಿಶ್ವನಾಥ ಯಡ್ತರೆ, ಸುಧಾ ಪಡುವರಿ, ಸುರೇಂದ್ರ ಶೆಟ್ಟಿ ಕೋಟೇಶ್ವರ, ಅಭಿಲಾಷ್ ಪಿ.ವಿ, ಯು. ರಾಜೇಶ್ ಕಾರಂತ್ ಉಪ್ಪಿನಕುದ್ರು, ರಘುರಾಮ ದೇವಾಡಿಗ ಆಲೂರು ಅವರನ್ನು ಆಯ್ಕೆ ಮಾಡಲಾಯಿತು.
ಕುಂದಾಪುರ ಸಹಾಯಕ ಕಮೀಷನರ್ ಮಹೇಶ್ಚಂದ್ರ ಅವರು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಪ್ರಶಾಂತ್ ಶೆಟ್ಟಿ ಅವರು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಈ ವೇಳೆ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಲತಾ ಇದ್ದರು.