ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಕರ್ಕಿಹಳ್ಳಿ ಹಾಗೂ ಮೇಡಿಕಲ್ ನಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿನ ಜನರು ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
ಕಾಫಿನಾಡಿಯ ಟ್ಯಾಂಕ್ ನಿಂದ ಕಲುಷಿತ ನೀರು ಪೂರೈಕೆ ಮಾಡಿರುವುದರಿಂದಾಗಿ ಜನರು ಅಸ್ವಸ್ಥರಾಗಿದ್ದಾರೆ. ಕರ್ಕಿಕಳ್ಳಿಯಲ್ಲಿ ಸುಮಾರು 500 ಹಾಗೂ ಮೇಡಿಕಲ್ ನಲ್ಲಿ 600ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 80 ವರ್ಷದ ವೃದ್ಧರೊಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಲ್ಲಿನ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ನೀರು ಸರಬರಾಜು ಮಾಡಿದ್ದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.