ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪಾರ್ವತಿ ಅವರನ್ನು ಮದುವೆಯಾಗಿದ್ದೇ ತಪ್ಪಾ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜೀನಾಮೆಗೆ ವಿಪಕ್ಷಗಳು ಈ ರೀತಿಯಾಗಿ ದುಂಬಾಲು ಬೀಳಬಾರದು ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ರಾಜಕೀಯ ದೊಂಬರಾಟ ನೋಡಿ ಅವರು ಸೈಟ್ ಗಳೇ ಬೇಡ ಎಂದು ಮರಳಿ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಬ್ಯೂಟಿ ಕ್ವೀನ್ ಮದುವೆ ಆಗೋಕೆ ಎಲ್ಲರಿಗೂ ಬಯಕೆ ಇರುತ್ತದೆ. ಆದರೆ ಈಗ ಬ್ಯೂಟಿ ಕ್ವೀನ್ ನ ಮದುವೆ ಆಗುವುದಕ್ಕೆ ಸಾಧ್ಯವಿಲ್ಲ. ಡಿ.ಕೆ. ಶಿವಕುಮಾರ್, ಡಾ.ಜಿ. ಪರಮೇಶ್ವರ್ ಪ್ರಯತ್ನ ಮಾಡುವುದರಲ್ಲಿ ತಪ್ಪಿಲ್ಲ. ಅವರು ಹಣದ ಆಸೆಗೆ ಬೀಳುವವರಲ್ಲ ಎಂದು ಇಬ್ರಾಹಿಂ ಹೇಳಿದ್ದಾರೆ.