ಬೆಂಗಳೂರು: ಅಪ್ರಾಪ್ತ ಬಾಲಕನೋರ್ವ ತನ್ನ ಉಡದಾರದಿಂದ ಆತ್ಮಹತ್ಯೆಗೆ ಶರಮಾಗಿರುವ ಘಟನೆ ನಡೆದಿದೆ.
ಈ ಘಟನೆ (Bengaluru) ಬ್ಯಾಡರಹಳ್ಳಿ (Byadarahalli) ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಧ್ರುವ(13) ಆತ್ಮಹತ್ಯೆಗೆ ಶರಣಾದ ಬಾಲಕ. ತನ್ನ 9 ವರ್ಷದ ತಂಗಿಯ ಎದುರೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.
ಧ್ರುವ ಹೆಚ್ಚಾಗಿ ಮೊಬೈಲ್ ನೋಡುತ್ತಿದ್ದ. ಮಂಗಳವಾರ ಪೋಷಕರು ಕೆಲಸಕ್ಕೆ ತೆರಳಿದ್ದರು. ಶಾಲೆ ಮುಗಿಸಿ ಬಂದ ಅಣ್ಣ-ತಂಗಿ ಮಾತ್ರ ಮನೆಯಲ್ಲಿದ್ದರು. ಆಗ ಬಾಲಕ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವೂ ಮುಗುವಿಗೆ ಇಲ್ಲ. ಆಕೆ ಸುಮ್ಮನೆ ನೋಡುತ್ತ ಕುಳಿತಿದ್ದಾಳೆ. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಕೂಡಲೇ ಆತಂಕಕೊಂಡು ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ.
ಬಾಲಕನ ತಂದೆ ಬಸವರಾಜ್ ಬೇಕರಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.