ಬೆಂಗಳೂರು: 16 ವರ್ಷದ ಬಾಲಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಬೆಳಗಾವಿಯಿಂದ ದಾನಿಯ ಯಕೃತ್ ಅನ್ನು ರಸ್ತೆ ಮೂಲಕ ಹುಬ್ಬಳ್ಳಿಗೆ ತಲುಪಿಸಿ, ಅಲ್ಲಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲಾಯಿತು.
ಬೆಂಗಳೂರಿನ ಯಶವಂತಪುರದಲ್ಲಿನ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಕಸಿ ಅಗತ್ಯವಿದ್ದ ರೋಗಿಯೊಬ್ಬರಿಗೆ ಜೋಡಣೆ ಮಾಡಲಾಯಿತು. ಬೆಳಗಾವಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದವರೆಗೆ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಿಂದ ಯಶವಂತಪುರ ಸ್ಪರ್ಶ ಆಸ್ಪತ್ರೆವರೆಗೆ ಜೀರೋ ಟ್ರಾಫಿಕ್ ಮೂಲಕ ಸಾಗಿಸಲಾಯಿತು.
63 ವರ್ಷದ ರೋಗಿಯೊಬ್ಬರಿಗೆ ಕಸಿ ಮಾಡಲಾಗಿದೆ. 16 ವರ್ಷದ ಬೆಳಗಾವಿಯ ಬಾಲಕ ಕೆಎಲ್ ಇ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದ ಬಾಲಕನ ದೇಹದಿಂದ ಯಕೃತ್ ನ್ನು ಬೇರ್ಪಡಿಸಿ ತಕ್ಷಣ ಝೀರೋ ಟ್ರಾಫಿಕ್ ಮೂಲಕ ಒಂದು ಗಂಟೆಯೊಳಗೆ ಹುಬ್ಬಳ್ಳಿಗೆ ತಲುಪಿಸಲಾಯಿತು. ಆನಂತರ ವಿಮಾನದ ಮೂಲಕ ಬೆಂಗಳೂರಿಗೆ ತಲುಪಿಸಲಾಯಿತು.