ಮಂಗಳೂರು: ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ಗೆ ಉಪನ್ಯಾಸಕಿ ಬಲಿಯಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮಂಗಳೂರಿನ 23 ವರ್ಷದ ಉಪನ್ಯಾಸಕಿ, ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರಿಗೆ ಇತ್ತೀಚೆಗೆ ಊಟ ಮಾಡಿದ ಬಳಿಕ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಬಳಿಕ ಇದು ಉಲ್ಬಣಗೊಂಡ ಪರಿಣಾಮ ಮೆದುಳಿಗೆ ಹಾನಿಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆದರೆ, ಉಪನ್ಯಾಸಕಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇಂದು ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ಐದು ನಿರ್ಗತಿಕ ರೋಗಿಗಳಿಗೆ ದಾನ ಮಾಡಲಾಯಿತು.
ಮೃತ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ಐವರಿಗೆ ದಾನ ಮಾಡಲಾಯಿತು. ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ನೀಡಲಾಯಿತು.