ಮಡಿಕೇರಿ: ಯುವತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಮಡಿಕೇರಿಯಲ್ಲಿ (Madikeri) ಈ ಘಟನೆ ನಡೆದಿದ್ದು, 24 ವರ್ಷದ ಯುವತಿ ಸಾವನ್ನಪ್ಪಿದ್ದಾರೆ. ನಿಲಿಕಾ ಪೊನ್ನಪ್ಪ (24) ಸಾವನ್ನಪ್ಪಿದ ಯುವತಿ ಎನ್ನಲಾಗಿದೆ.
ಈ ಯುವತಿಯು ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ನಿವಾಸಿ. ಗುರುವಾರ ಬೆಳಿಗ್ಗೆ ಮನೆಯಲ್ಲಿ ಯುವತಿಯು ಏಕಾಏಕಿ ಕುಸಿದು ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ನಿಲಿಕಾ ಅವರು ಮಡಿಕೇರಿ ಜಿಲ್ಲಾಸ್ಪತ್ರೆಯ ಉದ್ಯೋಗಿಯಾಗಿದ್ದಾರೆ. ನಿಲಿಕಾ ಸಾವಿಗೆ ಕುಟುಂಬಸ್ಥರು ಕಣ್ಣೀರಾಗಿದ್ದಾರೆ.