ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್ ಬಳಿ ಗೌರಿ ಗಣೇಶ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಸೆಪ್ಟೆಂಬರ್ 14ರಂದು ಮಧ್ಯಾಹ್ನ 6 ವರ್ಷದ ಬಾಲಕ ವಿನೀಶ್ 3ನೇ ಮಹಡಿಯಿಂದ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.
ಕಟ್ಟಡದ 3ನೇ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯಕ್ಕೆ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಆದರೆ ಮಗುವಿನ ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವ ಹಿನ್ನೆಲೆಯಲ್ಲಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಬಾಲಕ ವಿನೀಶ್‌ನ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡುವಂತೆ ಪೋಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್ ಗಿಫ್ಟ್?



















