ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ 9 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮರ ಬಿದ್ದ ಪರಿಣಾಮ 9 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತಾಗಿದೆ. ಈ ಘಟನೆ ನಗರದ ನಂದಿ ದುರ್ಗದ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ರಸ್ತೆಯ ಪಕ್ಕದಲ್ಲಿದ್ದ ಮರದ ಕೊಂಬೆ ಮುರಿದು ಬಾಲಕನ ತಲೆಯ ಮೇಲೆ ಬಿದ್ದ ಪರಿಣಾಮ ಬಾಲಕ ಜಾಡೇಂ ಲೂಕಸ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಾಲಕನ ತನ್ನ ತಂದೆಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮರದ ಕೊಂಬೆ ಮುರಿದು ಬಿದ್ದಿದ್ದರಿಂದಾಗಿ ಬಾಲಕ ಗಾಯಗೊಂಡಿದ್ದಾನೆ. ಆದರೆ, ಜೀವಕ್ಕೆ ಯಾವುದೇ ಅಪಾಯವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಬಿಎಂಪಿ ಆರಣ್ಯ ವಿಭಾಗದ ಅಧಿಕಾರಿಗಳು, ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎಲ್.ಜಿ ಸ್ವಾಮಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.