ಬೆಳಗಾವಿ : ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಯ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿರುವ ಪ್ರಭಾವತಿ ಪಾಟೀಲ ಅವರ ಬಲೇನೋ ಕಾರು ಬೆಳಗಾವಿಯಿಂದ ಹುಕ್ಕೇರಿ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಗೂಡ್ಸ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಗೂಡ್ಸ್ ಪಿಕ್ ಅಪ್ ವಾಹನ ಪಲ್ಟಿಯಾಗಿದ್ದು, ಏರಬ್ಯಾಗ ಒಪನ್ ಆದ ಕಾರಣ ಬಿಇಓ ಹಾಗೂ ಅವರ ಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯವಾಗ ಹಿನ್ನೆಲೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನಾ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!



















