ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಇಂದು ಮಹತ್ವದ ದಿನವಾಗಿದ್ದು, ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಹೈಕೋರ್ಟ್ ಇಂದು ಆದೇಶ ನೀಡಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಬೀಳಲಿದ್ದು, ಇದಕ್ಕಾಗಿ ದರ್ಶನ್ ಪರ ವಕೀಲರು ಸೇರಿದಂತೆ ಡಿ ಗ್ಯಾಂಗ್ ಎದುರು ನೋಡುತ್ತಿದೆ.
ಹೈಕೋರ್ಟ್ ಆದೇಶದ ಬಳಿಕ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ಪ್ರದೂಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯಲಿದೆ. ಈ ಹಿಂದೆ ಪ್ರದೂಷ್ ಅವರನ್ನು ನ್ಯಾಯಾಲಯಕ್ಕೆ ನೇರವಾಗಿ ಹಾಜರುಪಡಿಸಿ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿತ್ತು. ಆದರೆ ಕಳೆದ ಬಾರಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಇಂದಿಗೆ ಮುಂದೂಡಲಾಗಿತ್ತು.
ಹೈಕೋರ್ಟ್ ಆದೇಶದ ಹಿನ್ನೆಲೆ ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಪ್ರದೂಷ್ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ. ನೇರವಾಗಿ ಹಾಜರುಪಡಿಸುವ ಪ್ರಕ್ರಿಯೆಗೆ ಮತ್ತೊಂದು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.
ಇದೇ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಧಾರವಾಡ ಪೀಠಕ್ಕೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಹೀಗಾಗಿ ಇಂದು ಹೊರಬೀಳಲಿರುವ ಹೈಕೋರ್ಟ್ ಆದೇಶದ ಮೇಲೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : 22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!



















