ಹಾವೇರಿ: ಮಳೆಯಿಂದಾಗಿ ರಸ್ತೆ ಕಾಣದೆ ಚರಂಡಿಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಿವೇದನ್ ಗುಡಗೇರಿ (12) ಸಾವನ್ನಪ್ಪಿರುವ ಬಾಲಕ ಎನ್ನಲಾಗಿದೆ. ಬಾಲಕ ನಿವೇದನ್ ಗುರುವಾರ ಬೆಳಗ್ಗೆ ನಗರದಲ್ಲಿನ ಎಸ್ಪಿ ಕಚೇರಿಯ ಹತ್ತಿರ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಕಾಣದೆ, ಆಯ ತಪ್ಪಿ ಚರಂಡಿಗೆ ಬಿದ್ದಿದ್ದಾನೆ.
ಈ ವಿಚಾರ ತಿಳಿಯುತ್ತಿದ್ದಂತೆ ನಿವೇದನ್ ತಾಯಿ ಮೂರ್ಚೆ ಹೋಗಿದ್ದಾರೆ. ವಿಷಯ ತಿಳಿದು ಬಾಲಕ ನಿವೇದನ್ ಬಿದ್ದ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಬಾಲಕ ಮಾತ್ರ ಶವವಾಗಿ ಪತ್ತೆಯಾಗಿದ್ದಾನೆ.
ಬಾಲಕ ಸಿಗುತ್ತಿದ್ದಂತೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.