ಬೆಳಗಾವಿ : ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ.
15 ವರ್ಷದ ಮಹೇಶ್ ಗಣಾಚಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!


















